ಹೋರಾಟದ ಹಾದಿ

ಆದರ್ಶವಾದಿಗಳಿಗೆ ಕೊನೆಯಿರಬಹುದು, ಆದರ್ಶಕ್ಕಲ್ಲ.

ನಕ್ಸಲ್ ನಾಯಕ ನಂದಕುಮಾರ್ ಬಂಧನ

Posted by ajadhind on ಜೂನ್ 2, 2010

ಪ್ರಜಾವಾಣಿ ವಾರ್ತೆ

ಶಿವಮೊಗ್ಗ: ನಂದಕುಮಾರ್‌ನನ್ನು ನಾಲ್ಕೈದು ದಿನಗಳ ಹಿಂದೆಯೇ ಬಂಧಿಸಿದ್ದು, ಮತ್ತಷ್ಟು ವಿಚಾರಣೆ ಹಿನ್ನೆಲೆಯಲ್ಲಿ ಸುದ್ದಿ ಬಹಿರಂಗಪಡಿಸಿಲ್ಲ ಎಂದು ತಿಳಿದು ಬಂದಿದೆ. ಬಂಧಿತ ನಂದಕುಮಾರ್ ಕೆಲ ದಿನಗಳಿಂದ ಹೈದರಾಬಾದ್‌ನಲ್ಲಿದ್ದ. ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಈ ಬಂಧನವನ್ನು ಪೊಲೀಸರು ನಿರಾಕರಿಸಿದ್ದಾರೆ.

ಶಿವಮೊಗ್ಗ, ರಾಯಚೂರು ಜಿಲ್ಲೆಗಳಲ್ಲಿ ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದ ನಂದಕುಮಾರ್ ಹಲವು ಆರೋಪಗಳನ್ನು ಎದುರಿಸುತ್ತಿದ್ದ. ನಕ್ಸಲ್ ಮುಖಂಡನಾಗಿದ್ದ ಈತನ ಮಾಹಿತಿ ನೀಡಿವರಿಗೆ ಪೊಲೀಸ್ ಇಲಾಖೆ ಒಂದು ಲಕ್ಷ ರೂ ಬಹುಮಾನ ಘೋಷಿಸಿತ್ತು. 

ನಂದಕುಮಾರ್ ಮೂಲತಃ ಚಿಕ್ಕಮಗಳೂರಿನ ಕೊಪ್ಪ ತಾಲ್ಲೂಕಿನ ಕಾಚಿಕೊಪ್ಪ ಗ್ರಾಮದವನು. ಓದಿದ್ದು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ. ವಿದ್ಯಾರ್ಥಿದೆಸೆಯಲ್ಲಿಯೇ ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದ. ಕುದುರೆಮುಖ ಗಣಿಗಾರಿಕೆ ವಿರುದ್ಧ, ಅಲ್ಲಿನ ರಾಷ್ಟ್ರೀಯ ಉದ್ಯಾನ ವಿರುದ್ಧದ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂಎ ಪದವಿ ಪಡೆದಿದ್ದು, ಸ್ನಾತಕೋತ್ತರ ಪದವಿ ಪಡೆದ ನಂತರ ಮಲವಗೊಪ್ಪದ ಆಶಾ ಎಂಬುವರನ್ನು ಮಂತ್ರಮಾಂಗಲ್ಯ ಪದ್ಧತಿಯಂತೆ ವಿವಾಹವಾಗಿದ್ದ. ಆಶಾ ಕೂಡ ಶಂಕಿತ ನಕ್ಸಲ್ ಆಗಿದ್ದು, ಆಶಾಳನ್ನು ಈಚೆಗೆ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದು, ಸದ್ಯ ಪೊಲೀಸ್ ವಶದಲ್ಲಿದ್ದಾಳೆ. ನಂದಕುಮಾರ್ ಮತ್ತು ಆಶಾ 1999ರಿಂದ ನಾಪತ್ತೆಯಾಗಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದರು.

 

ಬಂಧಿತ ನಂದಕುಮಾರ್‌ನನ್ನು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಆದರೆ, ಎಸ್‌ಪಿ ಎಸ್. ಮುರುಗನ್, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

 
%d bloggers like this: